Friday, 22nd November 2024

ಕರೋನಾ ಸೋಂಕಿನಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ, ದೇಶದ ಆಸ್ತಿ ಮಾರಾಟದಲ್ಲಿ ಸರಕಾರ ವ್ಯಸ್ತವಾಗಿದೆ: ರಾಹುಲ್ ಗಾಂಧಿ

ನವದೆಹಲಿ: ಕರೋನಾ ಸೋಂಕಿನಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಸರ್ಕಾರ ವ್ಯಾಪಾರದಲ್ಲಿ ಕಾರ್ಯನಿರತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ದೇಶದಲ್ಲಿ ಏರಿಕೆಯಾಗುತ್ತಿರುವ ಪ್ರಕರಣಗಳು ಆತಂಕಕಾರಿಯಾಗಿವೆ. ಮೂರನೇ ಅಲೆ ಎಚ್ಚರಿಕೆಯ ಕಾರಣವಾಗಿ ತುರ್ತಾಗಿ ಲಸಿಕಾ ಕಾರ್ಯಕ್ರಮ ನಡೆಯ ಬೇಕಿದೆ. ಕೇಂದ್ರ ಸರ್ಕಾರ ವ್ಯಾಪಾರ ವಹಿವಾಟಿನಲ್ಲಿ ಕಾರ್ಯನಿರತವಾಗಿದೆ ಎಂದು ರಾಷ್ಟ್ರೀಯ ಸ್ವತ್ತುಗಳ ಮಾರಾಟದ ಕುರಿತು ವ್ಯಂಗ್ಯದ ಧಾಟಿಯಲ್ಲಿ ಹೇಳಿದ್ದಾರೆ.

ಕರೊನಾ ಪರಿಸ್ಥಿತಿ ಹಾಗೂ ಲಸಿಕೆ ನೀಡುವ ಕುರಿತು ಸರ್ಕಾರ ಯೋಚಿಸುತ್ತಿಲ್ಲ. ದೇಶದ ಆಸ್ತಿಯನ್ನು ಮಾರಾಟ ಮಾಡುವು ದರತ್ತ ಯೋಚನೆ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಕೇಂದ್ರ ಸಚಿವಾ ಲಯಗಳು ಮತ್ತು ಸಾರ್ವಜನಿಕ ವಲಯದ ಕಾಯಗಳ ಆಸ್ತಿ ನಗದೀಕರಣ ಪೈಪ್‌ಲೈನ್‌ಗೆ ಚಾಲನೆ ನೀಡಿದ್ದರು.

ಭಾರತದಲ್ಲಿ ಕಳೆದ 70 ವರ್ಷಗಳಲ್ಲಿ ನಿರ್ಮಿಸಿದ ಎಲ್ಲ ಆಸ್ತಿಗಳನ್ನು ಮತ್ತು ಪ್ರಮುಖ ವಲಯಗಳನ್ನು ಹಣ ಸಂಪಾದನೆಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದರು.