Thursday, 12th December 2024

ಈ ರಾಜ್ಯದಲ್ಲಿ 9 ರಿಂದ 12 ನೇ ತರಗತಿಯವರೆಗೆ ಭಗವದ್ಗೀತೆ ಬೋಧನೆ !

ನವದೆಹಲಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದ 9, 10, 11 ಹಾಗೂ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಯನ್ನು ಬೋಧಿಸಲಾಗುವುದು ಎಂದು ಹಿಮಾಚಲ ಪ್ರದೇಶದ ಶಿಕ್ಷಣ ಸಚಿವರು ಹೇಳಿದ್ದಾರೆ.

‘ಶಾಲೆಗಳಲ್ಲಿ ಸಂಸ್ಕೃತ ಹಾಗೂ ಹಿಂದಿ ಭಾಷೆಗಳಲ್ಲಿ ಭಗವದ್ಗೀತೆ ಕಲಿಸಲಾ ಗುತ್ತದೆ. ಮೂರನೇ ತರಗತಿಯಿಂದ ವಿದ್ಯಾರ್ಥಿಗಳಿಗೆ ಸಂಸ್ಕೃತ ಪರಿಚಯಿಸ ಲಾಗುವುದು ಎಂದು ಸಚಿವ ಗೋವಿಂದ್ ಸಿಂಗ್ ಠಾಕೂರ್ ಹೇಳಿದರು. ಈ ಬದಲಾವಣೆಗಳು ವಿದ್ಯಾರ್ಥಿ ಗಳಿಗೆ ತಮ್ಮ ಸಂಸ್ಕೃತಿಯ ಬಗ್ಗೆ ಕಲಿಸಲು ಹಾಗೂ ಅವರಿಗೆ “ನೈತಿಕ ವರ್ಧಕ” ನೀಡಲು ಸಹಾಯ ಮಾಡುತ್ತದೆ ಎಂದು ಸಚಿವರು ಪ್ರತಿಪಾದಿಸಿದರು.

2022-23ರ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಗಳಿಗೆ ಭಗವದ್ಗೀತೆ ಶಾಲಾ ಪಠ್ಯಕ್ರಮದ ಭಾಗವಾಗಲಿದೆ ಎಂದು ಗುಜರಾತ್ ಸರಕಾರ ಘೋಷಿಸಿದ ಎರಡು ವಾರಗಳ ನಂತರ ಠಾಕೂರ್ ಈ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಸರಕಾರ ಕೂಡ ರಾಜ್ಯದ ಶಾಲೆಗಳಲ್ಲಿ ‘ನೈತಿಕ ಶಿಕ್ಷಣ’ದ ಭಾಗವಾಗಿ ಗೀತಾವನ್ನು ಪರಿಚಯಿಸುವ ಕುರಿತು ಚಿಂತನೆ ನಡೆಸುತ್ತಿದೆ.