ಭೋಪಾಲ್: ಪಾಕಿಸ್ತಾನ ಪರ ಘೋಷಣೆ (Pro-Pakistan slogan) ಕೂಗಿದ ವ್ಯಕ್ತಿಗೆ ಮಧ್ಯಪ್ರದೇಶ (Madhya Pradesh) ಹೈಕೋರ್ಟ್ (High Court) ಭೋಪಾಲ್ ಪೊಲೀಸ್ ಠಾಣೆಯಲ್ಲಿ (Bhopal police station) 21 ಬಾರಿ ಭಾರತದ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಬೇಕು ಮತ್ತು ತಿಂಗಳಿಗೆ ಎರಡು ಬಾರಿ ‘ಭಾರತ್ ಮಾತಾ ಕಿ ಜೈ’ (Bharat Mata ki Jai) ಎಂದು ಘೋಷಣೆ ಕೂಗಬೇಕು ಎಂದು ಹೇಳಿ ಜಾಮೀನು ಮಂಜೂರು ಮಾಡಿದೆ.
ಫೈಝಲ್ ಅಲಿಯಾಸ್ ಫೈಜಾನ್ ಎಂಬಾತ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ ಅಡಿಯಲ್ಲಿ ಭೋಪಾಲ್‌ನ ಮಿಸ್ರೋಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಸರಿಸುಮಾರು ಒಂದು ತಿಂಗಳ ಬಳಿಕ ಆತನನ್ನು ಬಂಧಿಸಲಾಗಿತ್ತು. ಫೈಜಾನ್ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ, ದೇಶದ ಸಮಗ್ರತೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಸರ್ಕಾರಿ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು.
ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿ ಪಾಲಿವಾಲ್ ಅವರು 50,000 ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಶ್ಯೂರಿಟಿ ಸಲ್ಲಿಸುವಂತೆ ಹೇಳಿ ಫೈಜಾನ್‌ಗೆ ಜಾಮೀನು ನೀಡಿದ್ದಾರೆ. ಕಾನೂನು ಪ್ರಕ್ರಿಯೆಗಳ ಸಮಯದಲ್ಲಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಫೈಜಾನ್ ತನ್ನ ವಿಚಾರಣೆಯ ಮುಕ್ತಾಯದ ತನಕ ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರ ಮಿಸ್ರೋಡ್ ಪೊಲೀಸ್ ಠಾಣೆಗೆ ವರದಿ ಮಾಡುವಂತೆ ಆದೇಸಿದ್ದಾರೆ.
ಈ ಸಂದರ್ಭದಲ್ಲಿ 21 ಬಾರಿ ಪೊಲೀಸ್ ಠಾಣೆಯಲ್ಲಿ ಹಾರಿಸಿದ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಬೇಕು ಮತ್ತು ಪ್ರತಿ ಸಲವೂ ಎರಡು ಬಾರಿ ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಬೇಕು ಎಂದು ನ್ಯಾಯಧೀಶರು ಹೇಳಿದ್ದಾರೆ. ತಾನು ಹುಟ್ಟಿ ಬೆಳೆದ ದೇಶದ ಬಗ್ಗೆ ಹೆಮ್ಮೆಯ ಭಾವನೆ ಮೂಡಿಸಲು ಈ ಷರತ್ತು ವಿಧಿಸಲಾಗಿದೆ ಎಂದು ಕೋರ್ಟ್ ಹೇಳಿದೆ.
Double Murder Case: ಪ್ರಿಯಕರನ ಜೊತೆ ಚಕ್ಕಂದದಲ್ಲಿದ್ದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ
ತನಿಖೆಯ ನಂತರ ಫೈಜಾನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಫೈಜಾನ್ ವಿರುದ್ಧ 14 ಹಿಂದಿನ ಪ್ರಕರಣಗಳು ಸೇರಿವೆ ಎನ್ನಲಾಗಿದೆ.