Friday, 13th December 2024

ಉತ್ತರ ಪ್ರದೇಶ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ವದೆಹಲಿ: ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ಮಂಗಳವಾರ ಉತ್ತರ ಪ್ರದೇಶ ಪ್ರವೇಶಿಸಿದೆ.

ಒಂಬತ್ತು ದಿನಗಳ ವಿರಾಮದ ನಂತರ ಮತ್ತೆ ಯಾತ್ರೆ ಪುನಾರಂಭಗೊಂಡಿದೆ. ಈ ಯಾತ್ರೆ ಯು ಆರಂಭವಾಗಿ 110 ದಿನಗಳು ಕಳೆದಿದ್ದು, ಇಲ್ಲಿಯವರೆಗೆ 3,000 ಕಿ.ಮೀ. ಕ್ರಮಿಸಿದೆ.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಮಹಾ ರಾಷ್ಟ್ರ ಮತ್ತು ಹರಿಯಾಣದ ಭಾಗಗಳನ್ನು ಒಳಗೊಂಡಿದೆ. ಯಾತ್ರೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ.

ಜನವರಿ 26 ರಂದು ಶ್ರೀನಗರದಲ್ಲಿ ಕೊನೆಗೊಳ್ಳುವ ಯಾತ್ರೆಯ ನಂತರ, ಯಾತ್ರೆಯ ಸಂದೇಶ ಹರಡುವ ಉದ್ದೇಶದಿಂದ ಕಾಂಗ್ರೆಸ್ ‘ಹಾಥ್ ಸೇ ಹಾಥ್ ಜೋಡೋ’ ಅಭಿಯಾನ ಪ್ರಾರಂಭಿಸುತ್ತದೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷರು ಸಹೋದರಿ ಮತ್ತು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೇಶಾದ್ಯಂತ ‘ಹಾಥ್ ಸೇ ಹಾಥ್ ಜೋಡೋ’ ಅಭಿಯಾನ ಮುನ್ನಡೆಸುವ ಜವಾಬ್ದಾರಿಯನ್ನು ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.