ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ ನಡೆಸಲಾಗಿದೆ. ಈ ವೇಳೆ ನಡೆದ ತಿಕ್ಕಾಟದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದನ್ನು ತಡೆಯಲು ಖಾಕಿ ಪಡೆ ಅಶ್ರುವಾಯು ಶೆಲ್ ಹಾರಿಸಿ ದ್ದಾರೆ.
ಭರತ್‌ಪುರದ ಜಿಲ್ಲೆಯ ಜೈಪುರ- ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಹೆದ್ದಾರಿ ತಡೆದರು. ಇದರಿಂದ ವಾಹನ ದಟ್ಟಣೆ ಉಂಟಾಗಿ, ಜನರು ತೀವ್ರ ತೊಂದರೆ ಅನುಭವಿಸಿದರು. ಹೆದ್ದಾರಿ ತಡೆಯನ್ನು ತೆರವು ಮಾಡಲು ಪೊಲೀಸರು ಮುಂದಾದಾಗ ರೊಚ್ಚಿಗೆದ್ದ ಹೋರಾಟಗಾರರು ಖಾಕಿ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಇಬ್ಬರ ಮಧ್ಯೆ ತೀವ್ರ ತಿಕ್ಕಾಟ ನಡೆದಿದೆ.
ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಅಶ್ರುವಾಯು ಶೆಲ್ಗಳನ್ನು ಸಿಡಿಸಿ, ಗುಂಪನ್ನು ಚದುರಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಹಾನಿ ಉಂಟಾಗಿಲ್ಲ. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಸಮುದಾಯದ ಸದಸ್ಯರು ಜೈಪುರದಲ್ಲಿ ಸಾಮಾಜಿಕ ನ್ಯಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಹಿಂದುಳಿದ ವರ್ಗದಡಿ ಬರುವ ಮಾಲಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗ, ಶಿಕ್ಷಣ ಸಂಸ್ಥೆಗಳಲ್ಲಿ ಪ್ರತ್ಯೇಕ ಶೇಕಡಾ 12 ಮೀಸಲಾತಿ ನೀಡಬೇಕು ಎಂಬ ಹೋರಾಟ ನಡೆಸಲಾಗುತ್ತಿದೆ. ಶುಕ್ರವಾರ ಹೆದ್ದಾರಿ ತಡೆ ನಡೆಸುವುದಾಗಿ ಸಮುದಾಯ ಘೋಷಿಸಿತ್ತು. ಆಂದೋಲನದ ಹಿನ್ನೆಲೆಯಲ್ಲಿ ಬಲ್ಲಭಗಢ, ಹಲೈನಾ, ವೈರ್, ಆರೋಂಡಾ ಮತ್ತು ರಾಮಸ್‌ಪುರ ಮಾರ್ಗವಾಗು ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ತಡೆಯಲು ಪ್ರತಿಭಟನಾಕಾರರು ಮುಂದಾಗಿದ್ದರು. ಆದರೆ, ಪೊಲೀಸರು ಈ ಮಾರ್ಗದಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಇದು ಕಿತ್ತಾಟಕ್ಕೆ ಕಾರಣವಾಯಿತು.
ಬ್ಯಾರಿಕೇಡ್ ಹಾಕಿದ್ದರಿಂದ ಹೆದ್ದಾರಿ ತಡೆಗೆ ಅಡ್ಡಿಯಾದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಪೊಲೀಸರು ಜೊತೆಗೆ ವಾಗ್ವಾದಕ್ಕಿಳಿದರು.