Tuesday, 23rd April 2024

ಭವಾನಿಪುರ ಉಪಚುನಾವಣೆ: ಭರ್ಜರಿ ಗೆಲುವತ್ತ ದೀದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭವಾನಿ ಪುರ ವಿಧಾನಸಭೆ ಕ್ಷೇತ್ರದ ಉಪಚುನಾ ವಣೆಯ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿರುವ ಮಮತಾ ಬ್ಯಾನರ್ಜಿ ಭರ್ಜರಿ ಗೆಲುವು ಸಾಧಿಸುವತ್ತ ದಾಪುಗಾಲಿಡುತ್ತಿದ್ದಾರೆ.

ಒಂಬತ್ತು ಸುತ್ತಿನ ಮತ ಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 28,825 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ದೀದಿ 37,504 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಪ್ರಿಯಾಂಕಾ ತಿಬ್ರೆವಾಲ್ 8,679 ಮತಗಳನ್ನು ಪಡೆದಿದ್ದಾರೆ.

ಕಳೆದ ಗುರುವಾರ ಮತದಾನ ನಡೆದಿದ್ದು, ಶೇ 57ರಷ್ಟು ಮಾತ್ರ ಮತದಾನ ನಡೆದಿದೆ. ರಾಷ್ಟ್ರದ ಗಮನ ಸೆಳೆದಿರುವ ಈ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್​​ ವಿಂಗ್​​​ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಕಣದಲ್ಲಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿ ದಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲು ಭವಾನಿಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ಅನಿವಾರ್ಯ ವಾಗಿದೆ.

2011 ಮತ್ತು 2016ರ ವಿಧಾನಸಭೆ ಚುನಾವಣೆಗಳಲ್ಲಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಮತಾ ಗೆಲುವು ಸಾಧಿಸಿದ್ದರು.

Leave a Reply

Your email address will not be published. Required fields are marked *

error: Content is protected !!