ಲಕ್ನೋ: ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ್ದಾರೆ. 2022ರ ಫೆಬ್ರವರಿ ಅಥವ ಮಾರ್ಚ್ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಚಂದ್ರಶೇಖರ್ ಅಜಾದ್ ಅಲಿಯಾಸ್ ರಾವಣ್ ಶುಕ್ರವಾರ ತಮ್ಮ ಆಜಾದ್ ಸಮಾಜ ಪಕ್ಷದ ಚಿಹ್ನೆ ಬಿಡುಗಡೆ ಮಾಡಿದರು. 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಈ ಗುರುತನ್ನು ನೀಡಿದೆ ಎಂದು ಹೇಳಿದ್ದಾರೆ.
ಚಂದ್ರಶೇಖರ್ ಅಜಾದ್ ಬಿಜೆಪಿಯೇತರ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವು ದಾಗಿ ಹೇಳಿದ್ದರು. ದಲಿತರು, ಹಿಂದುಳಿದವರ ಹಕ್ಕುಗಳಿಗಾಗಿ ಹೋರಾಟ ಮಾಡು ತ್ತಿರುವ ಚಂದ್ರಶೇಖರ್ ಅಜಾದ್ ನೇತೃತ್ವದ ಪಕ್ಷ ಮಾಜಿ ಮುಖ್ಯಮಂತ್ರಿ ಮಾಯ ವತಿ ನೇತೃತ್ವದ ಬಿಎಸ್ಪಿ ಪಕ್ಷಕ್ಕೆ ಪರ್ಯಾಯವಾಗಿದ್ದು ಎಂದೇ ವಿಶ್ಲೇಷಿಸಲಾಗುತ್ತಿದೆ. ಬಿಹಾರ ಚುನಾವಣೆಯಲ್ಲಿ ಅವರು ಪಪ್ಪು ಯಾದವ್ ಜೊತೆ ಮೈತ್ರಿ ಮಾಡಿಕೊಂಡಿ ದ್ದರು.
ಉತ್ತರ ಪ್ರದೇಶದಲ್ಲಿ ದಲಿತರ ಹಿತ ರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ನಾಯಕರಲ್ಲಿ ಚಂದ್ರಶೇಖರ್ ಅಜಾದ್ ಮುಂಚೂಣಿ ಯಲ್ಲಿದ್ದಾರೆ.
2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಬಿಎಸ್‌ಪಿ ನಾಯಕಿ ಮಾಯಾವತಿಗೆ ಬಹುದೊಡ್ಡ ಸವಾಲು ಆಗಿದೆ. ಹಲವು ಮುಖಂಡರು ಪಕ್ಷ ತೊರೆದಿದ್ದು ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನಾಯಕಿಗೆ ಈ ಬಾರಿ ಕಠಿಣ ಸವಾಲು ಎದು ರಾಗಿದೆ. ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಇದೀಗ ಮಾಯವತಿಗೆ ಪ್ರತಿಸ್ಪರ್ಧಿಯಾಗಿ ಹೊರ ಹೊಮ್ಮಿದ್ದಾರೆ.