Friday, 22nd November 2024

ಗುಜರಾತ್‌ನ ಸಿಎಂ ಆಗಿ ʻಭೂಪೇಂದ್ರ ಪಟೇಲ್ʼ ಪ್ರಮಾಣ ವಚನ ಇಂದು

ಅಹಮದಾಬಾದ್ : ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ʻಭೂಪೇಂದ್ರ ಪಟೇಲ್ʼ ಸೋಮವಾರ ಪ್ರಮಾಣ ವಚನ ಸ್ವೀಕರಿಸ ಲಿದ್ದಾರೆ.

ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭ ದಲ್ಲಿ 60 ವರ್ಷದ ಭೂಪೇಂದ್ರ ಪಟೇಲ್ ಗುಜರಾತ್‌ನ 2ನೇ ಅವಧಿಗೆ ಗುಜರಾತ್ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮ ದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಭಾಗವಹಿಸಲಿದ್ದಾರೆ.

ಗಾಂಧಿನಗರದ ಹೊಸ ಸೆಕ್ರೆಟರಿಯೇಟ್ ಕಟ್ಟಡದಲ್ಲಿರುವ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿ ಪಟೇಲ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಇದೇ ವೇಳೆ ನೂತನ ಸಚಿವ ಸಂಪುಟವೂ ಪ್ರಮಾಣ ವಚನ ಸ್ವೀಕರಿಸಲಿದೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು 10-15 ಕ್ಯಾಬಿನೆಟ್ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.