Sunday, 13th October 2024

ಗುಜರಾತ್ ಚುನಾವಣೆ: ಭೂಪೇಂದ್ರ ಪಟೇಲ್ ಬಿಜೆಪಿ ಸಿಎಂ ಅಭ್ಯರ್ಥಿ

ಅಹಮದಾಬಾದ್: ಗುಜರಾತ್ ಚುನಾವಣೆಗೆ‌ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಎಂದು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಹೇಳಿದ್ದಾರೆ.

ಗುಜರಾತ್ ನಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾ ಹೇಳಿದ್ದಾರೆ.

2021 ರ ಸೆಪ್ಟೆಂಬರ್‌ನಲ್ಲಿ ವಿಜಯ್ ರೂಪಾನಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಿ ಅವರ ಸ್ಥಾನಕ್ಕೆ ಭೂಪೇಂದ್ರ ಪಟೇಲ್‌ ಅವರನ್ನು ಮುಖ್ಯಮಂತ್ರಿಯನ್ನಾ ಗಿಸಲಾಗಿತ್ತು.

ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗಧ್ವಿ ಅವರು ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ. ಚುನಾವಣೆಗೆ ಸಿಎಂ ಮುಖವನ್ನು ಘೋಷಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಗುಜರಾತ್‌ನ ಒಟ್ಟು 182 ಸ್ಥಾನಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ಡಿಸೆಂಬರ್ 8 ರಂದು ನಡೆಯಲಿದೆ.