Sunday, 15th December 2024

ಶಶಿ ತರೂರ್’ಗೆ ಬಿಗ್ ರಿಲೀಫ್

ನವದೆಹಲಿ : ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್’ಗೆ ದೆಹಲಿ ನ್ಯಾಯಲಯವು ಬಿಗ್ ರಿಲೀಫ್ ನೀಡಿದೆ.

ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ, ತನಿಖೆ ನಡೆಸಿದ ವಿವಿಧ ತಜ್ಞರು ಸುನಂದಾ ಸಾವಿಗೆ ಕಾರಣವೇನೆಂದು ಖಚಿತ ಅಭಿಪ್ರಾಯ ನೀಡಿಲ್ಲ. ಹೀಗಾಗಿ ತಮ್ಮ ವಿರುದ್ಧದ ಆರೋಪ ಕೈಬಿಡುವಂತೆ ಕಾಂಗ್ರೆಸ್ ನಾಯಕ ಶಶಿ ತರೂರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು.

ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಶಶಿ ತರೂರ್ ಮನವಿ ಪುರಸ್ಕರಿಸಿ, ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಸೂಚಿಸಿದೆ. ಈ ಮೂಲಕ ಕಾಂಗ್ರೆಸ್ ನಾಯಕ ತರೂರ್ ಗೆ ಬಿಗ್ ರಿಲೀಫ್ ನೀಡಿದೆ.