Friday, 13th December 2024

ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆ

ಬಿಹಾರ: ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿರುವ ಹನುಮಾನ್ ದೇವಾಲಯದ ಆವರಣದಲ್ಲಿ ಗೋಮಾಂಸ ಪತ್ತೆಯಾದ ಘಟನೆ ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಕೋಮು ಗಲಭೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದೇವಳದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹಾಸ್ಪುರದ ಬಾಲಾಬಿಘಾದಲ್ಲಿರುವ ಹನುಮಾನ್ ದೇಗುಲದಲ್ಲಿ ಶನಿವಾರ ಸ್ಥಳೀಯರು ಗೋಮಾಂಸ ಇರಿಸಿರುವುದನ್ನು ಕಂಡು ಪೊಲೀಸರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿ ಗಳಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ದೇವಸ್ಥಾನದ ಅವರದಲ್ಲಿದ್ದ ಗೋ ಮಾಂಸವನ್ನು ತೆರವುಗೊಳಿಸಿ, ಪ್ರಕರಣ ದಾಖಲಿಸಿ ಕೊಂಡು ಈ ಪ್ರದೇಶದಲ್ಲಿ ಕೋಮು ಸೌಹಾರ್ದತೆ ಕದಡಲು ಕೆಲವು ಸಮಾಜ ವಿರೋಧಿಗಳು ಗೋಮಾಂಸವನ್ನು ದೇವಸ್ಥಾನದೊಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.

ಸಮೀಪದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಸಮಾಜಘಾತುಕರನ್ನು ಗುರುತಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನದ ಸುತ್ತ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ.