Friday, 13th December 2024

ದ್ವಿಚಕ್ರ ವಾಹನಗಳಿಗೆ ಟಿಪ್ಪರ್ ಲಾರಿ ಡಿಕ್ಕಿ: ಆರು ಸಾವು, 9 ಜನಕ್ಕೆ ಗಾಯ

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ 9 ಜನ ಗಾಯಗೊಂಡಿದ್ದಾರೆ.

ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿ ದ್ದಾರೆ ಮೊದಲು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಪಾದಚಾರಿಗಳಿಗೂ ಗುದ್ದಿದೆ, ಪರಿಣಾಮ ಒಂಬತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ದ್ದಾರೆ. ಇದರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಟಿಪ್ಪರ್ ಲಾರಿ ವಾಹನಗಳಿಗೆ ಮಾತ್ರವಲ್ಲದೆ ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಚೆಂಗಲ್ಪಟ್ಟು ಪೊಲೀಸ್ ಮೂಲಗಳು ತಿಳಿಸಿವೆ.