ಅಹಮದಾಬಾದ್: ಗುಜರಾತ್‌ನ ಗಾಂಧಿನಗರ ಮಹಾನಗರ ಪಾಲಿಕೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ.
ಆಡಳಿತಾರೂಢ ಬಿಜೆಪಿ 39 ಸ್ಥಾನಗಳಲ್ಲಿ, ಕಾಂಗ್ರೆಸ್ ಎರಡು ಸ್ಥಾನಗಳು ಹಾಗೂ ಎಎಪಿ ಕೇವಲ ಒಂದು ಸ್ಥಾನದಲ್ಲಿ ಗೆಲುವು ಪಡೆದಿವೆ.
ಅ.4ರಂದು ಗಾಂಧಿನಗರ ಪಾಲಿಕೆಯ 44 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್‌ನ ತಲಾ 44 ಅಭ್ಯರ್ಥಿಗಳು, ಎಎಪಿಯಿಂದ 40 ಅಭ್ಯರ್ಥಿಗಳು ಸೇರಿದಂತೆ ಒಟ್ಟು 161 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. 2022ರ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಫಲಿತಾಂಶ ಮಹತ್ವ ಪಡೆದಿದೆ.
2016ರ ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 16 ಸ್ಥಾನಗಳಲ್ಲಿ ಗೆಲುವು ಸಾಧಿಸಿ ದ್ದವು. ಆಗ ಒಟ್ಟು 32 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.
ಈ ವರ್ಷ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಪಾಲಿಕೆ ಚುನಾವಣೆಯು ಕೋವಿಡ್-19 ಕಾರಣ ಗಳಿಂದಾಗಿ ಮುಂದೂಡಲಾಗಿತ್ತು. ರಾಜ್ಯದ ಮುಖ್ಯಮಂತ್ರಿ ಮತ್ತು ಸಂಪುಟದ ಬದಲಾ ವಣೆಯ ಹಿನ್ನೆಲೆಯಲ್ಲಿ ಬಿಜೆಪಿಗೆ ಈ ಚುನಾವಣೆಯು ಪರೀಕ್ಷೆಯಂತಾಗಿದೆ. ಇದೇ ವರ್ಷ ಫೆಬ್ರುವರಿಯಲ್ಲಿ ನಡೆದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ದಾಖಲಿಸಿತ್ತು.