Wednesday, 11th December 2024

ಬಿಜೆಪಿ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ

ಲಕ್ನೊ: ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿ ಪಕ್ಷದ ಹಿರಿಯ ಮುಖಂಡ ಕಲ್ಯಾಣ್ ಸಿಂಗ್(89) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವ ಕಲ್ಯಾಣ್​ ಸಿಂಗ್​ರ ಆರೋಗ್ಯ ಕಳೆದ 15 ದಿನದಿಂದ ತೀವ್ರವಾಗಿ ಹದಗೆಟ್ಟಿದೆ. ಲಕ್ನೊದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಗುರುವಾರ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​, ಬಿಜೆಪಿ ನಾಯಕ ಜೆಪಿ ನಡ್ಡಾ ಆಸ್ಪತ್ರೆಗೆ ಭೇಟಿ ನೀಡಿ ಕಲ್ಯಾಣ್​ ಸಿಂಗ್​ರ ಯೋಗಕ್ಷೇಮ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರೂ ಕಲ್ಯಾಣ್​ ಸಿಂಗ್​ ಬೇಗ ಚೇತರಿಕೆ ಕಾಣಲಿ ಎಂದು ಪ್ರಾರ್ಥಿಸಿದ್ದಾರೆ.

ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಕಲ್ಯಾಣ್​ ಸಿಂಗ್​, ಎರಡು ಬಾರಿ ಉತ್ತರಪ್ರದೇಶದ ಸಿಎಂ ಆಗಿದ್ದರು. ರಾಜಸ್ತಾನ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿಯೂ ಕೆಲಸ ನಿರ್ವಹಿಸಿದ್ದಾರೆ.