Thursday, 12th December 2024

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಇಂದಿನಿಂದ ಆರಂಭ

ಹೈದರಾಬಾದ್: ಆಂಧ್ರ ಪ್ರದೇಶದ ಹೈದರಾಬಾದ್’ನಲ್ಲಿ ಶನಿವಾರ ಮತ್ತು ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾ ಗುತ್ತಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೈದರಾಬಾದ್’ಗೆ ಬಂದಿದ್ದಾರೆ. ಸಂಜೆ ವೇಳೆಗೆ ಪ್ರಧಾನಿ ಮೋದಿ ಹೈದರಾಬಾದ್​ಗೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾರ್ಯಕಾರಿಣಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಭಾಗವಹಿಸುತ್ತಿದ್ದು ಹೈದರಾಬಾದ್’ಗೆ ತೆರಳಿದ್ದಾರೆ.

ಬಿಜೆಪಿ ‌ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣಾ, ಸಿ.ಟಿ.ರವಿ, ನಳೀನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂಗಳಾದ ಕೆ.ಎಸ್. ಈಶ್ವರಪ್ಪ, ಆರ್‌.ಅಶೋಕ್, ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಡಾ.ಅಶ್ವಥ್ ನಾರಾಯಣ ಮತ್ತು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಭಾಗಿ ಯಾಗುತ್ತಾರೆ.