Friday, 13th December 2024

ರಾಜಸ್ಥಾನದ ಬಿಜೆಪಿ ಶಾಸಕಿ ಕೊರೋನಾ ಸೋಂಕಿಗೆ ಬಲಿ

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಬಳಿಕ ಅವರು ಹರ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಾಜಸ್ಥಾನದ ರಾಜ್‌ಸಮಂಧ್ ಕ್ಷೇತ್ರದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿ ದ್ದಾರೆ. ಗುರುಗಾಂವ್‌ ಸಮೀಪದ ಮೇದಾಂತ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕಿರಣ್ ಮಹೇಶ್ವರಿ 2018ರ ಚುನಾವಣೆಯಲ್ಲಿ 89,709 ಮತಗಳನ್ನು ಪಡೆದು ಕಾಂಗ್ರೆಸ್‌ನ ನಾರಾಯಣ್ ಸಿಂಗ್ ಅವರನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದರು.