Sunday, 15th December 2024

ನಿಗೂಢವಾಗಿ ಮೃತಪಟ್ಟ ಬಿಜೆಪಿ ಸಂಸದ ?

ನವದೆಹಲಿ: ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಇದನ್ನು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆಯನ್ನು ಮುಂದೂಡಲಾಗಿದೆ.

1958 ರಲ್ಲಿ ಹಿಮಾಚಲ ಪ್ರದೇಶದ ಮಾಂಡಿಯಲ್ಲಿ ಜನಿಸಿದ್ದ ಶರ್ಮಾ 2014 ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿ ದ್ದರು. 2019ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದರು. ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲೂ ಸೇವೆ ಸಲ್ಲಿಸಿದ್ದ ಶರ್ಮಾ. ಅವರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily