Thursday, 12th December 2024

ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂಬ ಹೇಳಿಕೆ ನೀಡಿದ ಸಂಸದನಿಗೆ ಕೊರೊನಾ ಪಾಸಿಟಿವ್

ಕೋಲ್ಕತಾ: ಕರೊನಾ ಬಂದ್ರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳುತ್ತಿದ್ದೆ ಎಂಬ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಸಂಸದನಿಗೆ ಕರೊನಾ ಪಾಸಿಟಿವ್ ಬಂದಿದೆ. ಅದೇ ಬಿಜೆಪಿ ಮುಖಂಡ ಅನುಪಮ್ ಹಜ್ರಾ ಅವರಿಗೆ ಕರೊನಾ ಪಾಸಿಟಿವ್​ ವರದಿ ಬಂದಿದೆ.

ಟಿಎಂಸಿಯ ಸಂಸದರಾಗಿದ್ದ ಹಜ್ರಾ, ಕಳೆದ ವರ್ಷ ಬಿಜೆಪಿಗೆ ಸೇರಿದ್ದಾರೆ. ಇತ್ತೀಚೆಗೆ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರು ಮಮತಾ ಬ್ಯಾನರ್ಜಿ ವಿರುದ್ಧ ತಬ್ಬಿಕೊಳ್ಳುವ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ.

ಕರೊನಾ ಪಾಸಿಟಿವ್​ ಬಂದಿರುವ ವ್ಯಕ್ತಿಗಳ ಕುಟುಂಬಸ್ಥರು ಯಾವ ರೀತಿಯಲ್ಲಿ ನೋವನ್ನು ಅನುಭವಿಸುತ್ತಿರುತ್ತಾರೆ, ಅವರ ಮನೆಯಲ್ಲಿ ಎಂಥ ಬಿಗುವಿನ ವಾತಾವರಣ ಇರುತ್ತದೆ ಎನ್ನುವುದನ್ನು ತೋರಿಸುವ ಸಲುವಾಗಿ ನಾನು ಮಮತಾ ಅವರನ್ನು ತಬ್ಬಿಕೊಳ್ಳುತ್ತಿದ್ದೆ ಎಂದು ಇತ್ತೀಚೆಗಷ್ಟೇ ಕಿಡಿ ಕಾರಿದ್ದರು.

ಕಾರ್ಯಕ್ರಮದಲ್ಲಿ ಹಜ್ರಾ ಮತ್ತು ಕೆಲ ಬಿಜೆಪಿ ಕಾರ್ಯಕರ್ತರು ಮಾಸ್ಕ್ ಧರಿಸಿರಲಿಲ್ಲ. ಈ ಬಗ್ಗೆ ಪ್ರಶ್ನೆ ಮಾಡಲಾಗಿ ಹಜ್ರಾ, ‘ನಮ್ಮ ಪಕ್ಷದ ಕಾರ್ಯಕರ್ತರು ಕರೊನಾಕ್ಕಿಂತ ದೊಡ್ಡ ಶತ್ರುಗಳ ವಿರುದ್ಧ ಹೋರಾಡುತ್ತಿದ್ದಾರೆ. ಅವರು ಮಮತಾ ಬ್ಯಾನರ್ಜಿ ವಿರುದ್ಧ ಹೋರಾಡುತ್ತಿದ್ದಾರೆ’ ಎಂದಿದ್ದರು.

ಟಿಎಂಸಿ ಹಜ್ರಾ ಹೇಳಿಕೆಯ ವಿರುದ್ಧ ಸಿಲಿಗುರಿಯಲ್ಲಿ ಪೊಲೀಸ್ ದೂರು ದಾಖಲಾಗಿದೆ. ನಾವು ಅನುಪಮ್ ಹಜ್ರಾ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದೇವೆ. ಕೂಡಲೇ ಅವರ ವಿರುದ್ಧ ಕ್ರಗೊಳ್ಳಬೇಕೆಂದು ಪೊಲೀಸರಿಗೆ ಒತ್ತಾಯಿಸಿದ್ದೇವೆ ಎಂದು ಟಿಎಂಸಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.