Sunday, 15th December 2024

ಉ.ಪ್ರದೇಶ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮುಂದೂಡಿಕೆ

ಲಕ್ನೋ: ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನ ಹೊಂದಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಪ್ರಣಾಳಿಕೆ ಬಿಡುಗಡೆ ಯನ್ನು ಬಿಜೆಪಿ ಭಾನುವಾರ ಮುಂದೂಡಿದೆ.

ಬಿಜೆಪಿ ಕಚೇರಿಯಲ್ಲಿ ಬೆಳಗ್ಗೆ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ನಿಗದಿಯಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಮತ್ತು ಪಕ್ಷದ ರಾಜ್ಯಾಧ್ಯಕ್ಷರು ಸೇರಿದ್ದರು.

ಲತಾ ಮಂಗೇಶ್ಕರ್ ಅವರ ನಿಧನದ ದುಃಖದಿಂದಾಗಿ , ನಾವು ಲೋಕ ಕಲ್ಯಾಣ ಸಂಕಲ್ಪ ಪತ್ರದ ಬಿಡುಗಡೆಯನ್ನು ಮುಂದೂಡುತ್ತಿದ್ದೇವೆ. ಅದರ ಬಿಡುಗಡೆಯ ಮುಂದಿನ ದಿನಾಂಕವನ್ನು ನಾವು ನಂತರ ನಿರ್ಧರಿಸುತ್ತೇವೆ ಎಂದು ಸಿಂಗ್ ಹೇಳಿದರು.