Saturday, 14th December 2024

ತ್ರಿಪುರಾ ಮುನ್ಸಿಪಲ್ ಕಾರ್ಪೊರೇಷನ್ ಮತ ಎಣಿಕೆ: ಅರಳಿದ ಕಮಲ

ಅಗರ್ತಲಾ: ತ್ರಿಪುರಾದಲ್ಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಗೆಲ್ಲುವ ಮೂಲಕ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದೆ. ಅಗರ್ತಲಾ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ಸ್ಪಷ್ಟ ಬಹುಮತ ವನ್ನು ಬಿಜೆಪಿ ಪಡೆದಿದೆ.

51 ವಾರ್ಡ್‌ಗಳಲ್ಲಿ 29 ಅನ್ನು ಗೆದ್ದು ಬಹುಮತ ಗಳಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬಿಜೆಪಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಶೇ.80ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಎಲ್ಲಾ ಪುರಸಭೆಗಳನ್ನು ಗೆಲ್ಲಲು ಮುಂದಾ ಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿದ್ದಾರೆ.

ಬಿಪ್ಲಬ್ ಕುಮಾರ್ ದೇಬ್ ಪ್ರಸ್ತುತ ತ್ರಿಪುರಾದ ಮುಖ್ಯಮಂತ್ರಿಯಾಗಿದ್ದು, 2018 ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಯನ್ನು ಗೆಲುವಿನತ್ತ ಮುನ್ನಡೆಸಿದ್ದರು. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನೇತೃತ್ವದ ಎಡರಂಗ ಸರ್ಕಾರದ 25 ವರ್ಷಗಳ ಆಡಳಿತ ವನ್ನು ಅಂತ್ಯಗೊಳಿಸಿದ್ದರು.