Saturday, 27th July 2024

ಲಖಿಂಪುರ ಖೇರಿ: ಬಿಜೆಪಿಗೆ ಏಳು ಸ್ಥಾನಗಳಲ್ಲಿ ಮುನ್ನಡೆ

ಲಕ್ನೋ: ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಗುರುವಾರ ಬೆಳಗ್ಗೆ 8 ಗಂಟೆಗೆ ಆರಂಭ ವಾಗಿದ್ದು, ಕೇಂದ್ರದ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಹಲ್ಲೆ ನಡೆಸಿರುವ ಲಖಿಂಪುರ ಖೇರಿಯಲ್ಲಿ ಬಿಜೆಪಿ ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಏಳು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಕಳೆದ ಅಕ್ಟೋಬರ್‌ನಲ್ಲಿ ಲಖಿಂಪುರ ಖೇರಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದರು.

ಬಿಜೆಪಿ ಕಾರ್ಯಕರ್ತರಿದ್ದ ಕಾರು ವೇಗವಾಗಿ ಪ್ರತಿಭಟನಾ ನಿರತ ರೈತರ ಗುಂಪಿನ ಮೇಲೆ ಹರಿದಿತ್ತು. ಬಳಿಕ ರೈತರ ಮೇಲೆ ಹಲ್ಲೆ ನಡೆಸಿದ ಆರೋಪಗಳು ಕೇಳಿಬಂದಿದ್ದವು. ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ನನ್ನು ಪೊಲೀಸರು ಬಂಧಿಸಿದ್ದು, ಕಳೆದ ತಿಂಗಳು ಅವರು ಜಾಮೀನು ಪಡೆದಿದ್ದರು. ಈ ಘಟನೆಯ ಬಳಿಕ ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ರೈತ ವಿರೋಧಿ ನಿರ್ಧಾರಗಳ ಬಗ್ಗೆ ವಿಪಕ್ಷಗಳು ಪ್ರಸ್ತಾಪಿಸಿವೆ.

ಆದರೆ ಈ ಎಲ್ಲಾ ಎಂಟು ವಿಧಾನಸಭಾ ಸ್ಥಾನಗಳು ಬಿಜೆಪಿ ಪಾಲಾಗಿವೆ. 

error: Content is protected !!