ಇಟಾನಗರ: ಅರುಣಾಚಲ ಪ್ರದೇಶದಲ್ಲಿ 60 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಪಡೆದುಕೊಂಡು ಅಧಿಕಾರಕ್ಕೆ ಮರಳಿದೆ.
ಭಾನುವಾರ ನಡೆದ ಮತ ಎಣಿಕೆಯಲ್ಲಿ 60 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಪಕ್ಷವು 46 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಿದ್ದ ರಿಂದ ಬಿಜೆಪಿ ಸತತ ಮೂರನೇ ಬಾರಿಗೆ ಅರುಣಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಮರಳಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯೊಂದಿಗೆ ಈಶಾನ್ಯ ರಾಜ್ಯದ ವಿಧಾನಸಭೆಯ 50ಸ್ಥಾನಗಳಿಗೆ ಚುನಾವಣೆ ಸಹ ನಡೆದಿತ್ತು.
ಅವಿರೋಧವಾಗಿ ಗೆದ್ದ 10 ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ಪೆಮಾ ಖಂಡು ಕೂಡ ಒಬ್ಬರು. ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ ಮತ್ತು ಎನ್ಸಿಪಿ ಎರಡು ಮತ್ತು ಒಂದು ಸ್ಥಾನವನ್ನು ಪಡೆದುಕೊಂಡಿವೆ.
ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ತಲಾ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. 2019ರಲ್ಲಿ ಕೇಸರಿ ಪಕ್ಷ 41 ಸ್ಥಾನಗಳನ್ನು ಗೆದ್ದಿತ್ತು.