Sunday, 15th December 2024

ಮಹಾರಾಷ್ಟ್ರದಲ್ಲಿ 1,500 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆ

ಮುಂಬೈ : ಕರೋನಾ ಹೊತ್ತಲ್ಲೇ ಮಹಾರಾಷ್ಟ್ರದಲ್ಲಿ ಇದೀಗ 1,500 ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಇರುವುದು ದೃಢಪಟ್ಟಿದೆ.

ಮಹಾರಾಷ್ಟ್ರದಲ್ಲಿ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಅಬ್ಬರ ಶುರುವಾ  ಗಿದ್ದು, 1,500 ಜನರಲ್ಲಿ ಫಂಗಸ್ ಸೋಂಕು ಪತ್ತೆಯಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜೊತೆಗೆ ಬ್ಲ್ಯಾಕ್ ಫಂಗಸ್ ಸೋಂಕಿನ ಕುರಿತು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.