Friday, 13th December 2024

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಮಹಿಳೆ ಸೇರಿ ಇಬ್ಬರ ಸಾವು

ಮುಂಬೈ: ಮಹಾರಾಷ್ಟ್ರ ರಾಜ್ಯದ ರಾಯ್ ಗಾಡ್ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ರಾಯ್ ಗಾಡ್ ಜಿಲ್ಲೆಯ ಖೊಪೊಲಿ ಪಟ್ಟಣದ ಸಜ್ಗೌನ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಫ್ಯಾಕ್ಟರಿಯಲ್ಲಿ ಈ ಸ್ಪೋಟ ಸಂಭವಿಸಿದ್ದು ನಂತರ ಫ್ಯಾಕ್ಟರಿಯ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿತು. ಮೃತರಲ್ಲಿ ಒಬ್ಬ ಮಹಿಳೆ ಕೂಡ ಸೇರಿದ್ದಾರೆ. ಇತರ ಆರು ಮಂದಿಗೆ ಗಾಯವಾಗಿದೆ.

ಘಟನೆ ನಡೆದ ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಖೊಪೊಲಿ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.