Friday, 20th September 2024

ಇಸ್ರೇಲ್‌ನ ರಾಯಭಾರ ಕಚೇರಿ ಬಳಿ ಸ್ಪೋಟ: ದೆಹಲಿ ಪೊಲೀಸರ ಪರಿಶೀಲನೆ ತೀವ್ರ

ನವದೆಹಲಿ: ಕಳೆದ ಶುಕ್ರವಾರ ಇಸ್ರೇಲ್‌ನ ರಾಯಭಾರ ಕಚೇರಿ ಬಳಿ ಸ್ಪೋಟ ಸಂಭವಿಸಿದ ಸ್ಥಳಕ್ಕೆ ದೆಹಲಿಯ ವಿಶೇಷ ಘಟಕದ ಪೊಲೀಸರು ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಇಸ್ರೇಲ್‌ನ ರಾಯಭಾರ ಕಚೇರಿ ಬಳಿ ಶುಕ್ರವಾರ ಸಂಜೆ ಸ್ಪೋಟ ಸಂಭವಿಸಿತ್ತು. ವಿಶೇಷ ಘಟಕದ ‍ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

‘ಶುಕ್ರವಾರ ಸಂಜೆ ಸುಧಾರಿತ ಸ್ಫೋಟಕ ಸಾಧನ ಸ್ಪೋಟಗೊಂಡಿತ್ತು. ಅದೃಷ್ಟವಶಾತ್‌ ಯಾರು ಗಾಯಗೊಂಡಿಲ್ಲ. ಆಸ್ತಿ ಹಾನಿ ಸಂಭವಿಸಿಲ್ಲ’ ಎಂದು ದೆಹಲಿ ಪೊಲೀಸರು ಹೇಳಿದರು.

ಸ್ಫೋಟ ಸಂಭವಿಸಿದ ಸ್ಥಳದಿಂದ ಕೆಲವೇ ಅಂತರದಲ್ಲಿ, ‘ಬೀಟಿಂಗ್‌ ರಿಟ್ರೀಟ್‌’ (ಗಣರಾಜ್ಯೋತ್ಸವದ ಅಂಗವಾಗಿ) ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು.