Thursday, 19th September 2024

ಸ್ವರ್ಣ ಮಂದಿರದ ಬಳಿ ಮೂರನೇ ಸ್ಫೋಟ

ಮೃತಸರ: ಸ್ವರ್ಣ ಮಂದಿರದ ಬಳಿ ಮೂರನೇ ಬಾರಿಗೆ ಸ್ಫೋಟ ಸಂಭವಿಸಿದೆ. ಪೊಲೀಸ್ ಸಿಬ್ಬಂದಿ ಮತ್ತು ಫೋರೆನ್ಸಿಕ್ ತಂಡದ ಸದಸ್ಯರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ.

ಕಳೆದ ಒಂದು ವಾರದಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ.

ಏಪ್ರಿಲ್ 12 ರಂದು, ಬಟಿಂಡಾ ಮಿಲಿಟರಿ ನಿಲ್ದಾಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸೇನಾ ಯೋಧರು ನಿದ್ರೆ ಯಲ್ಲಿಯೇ ಸಾವನ್ನಪ್ಪಿದ್ದರು. ನಾಲ್ವರು ಯೋಧರನ್ನು ಸಾಗರ್, ಕಮಲೇಶ್, ಸಂತೋಷ್ ಮತ್ತು ಯೋಗೇಶ್ ಎಂದು ಗುರುತಿಸಲಾಗಿದೆ. ಕರ್ತವ್ಯದ ಅಂತ್ಯದ ನಂತರ ಅವರು ತಮ್ಮ ಕೊಠಡಿಗಳಲ್ಲಿ ಮಲಗಿದ್ದರು, ಇಬ್ಬರು ಮುಸುಕುಧಾರಿ ವ್ಯಕ್ತಿಗಳು, ಬಿಳಿ ಕುರ್ತಾ ಪೈಜಾಮಾದಲ್ಲಿ, ರೈಫಲ್‌ಗಳು ಮತ್ತು ಹರಿತವಾದ ಆಯುಧ ಗಳಿಂದ ಅವರ ಮೇಲೆ ದಾಳಿ ಮಾಡಿದರು. ನಾಲ್ವರು ಯೋಧರು ಅವರ ಕೊಠಡಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು.

ಸಿಖ್ಖರ ಪವಿತ್ರ ಸ್ವರ್ಣಮಂದಿರದ ಸಮೀಪ ಸೋಮವಾರ ಕಚ್ಚಾಬಾಂಬ್‌ ಸ್ಫೋಟ ಸಂಭವಿಸಿತ್ತು ಅದು ಎರಡನೇ ಸ್ಫೋಟ ವಾಗಿತ್ತು ಒಬ್ಬರಿಗೆ ಗಾಯವಾಗಿತ್ತು. ಮೊನ್ನೆ ಕೂಡ ಇದೇ ರೀತಿಯ ಕಚ್ಚಾ ಬಾಂಬ್‌ ಸ್ಫೋಟಗೊಂಡು ಜನರನ್ನು ಆತಂಕಕ್ಕೀಡು ಮಾಡಿದ ಬೆನ್ನಲ್ಲೇ ಅದೇ ರೀತಿಯ ಘಟನೆ ನಡೆದಿದೆ.

ಖಲಿಸ್ತಾನಿ ಉಗ್ರರ ಉಪಟಳ ಹೆಚ್ಚಿರುವ ನಡುವೆಯೇ ಸಂಭವಿಸಿದ ಈ ಸ್ಫೋಟಗಳು ಅಮೃತಸರ ಜನರನ್ನು ಆತಂಕಕ್ಕೀಡು ಮಾಡಿವೆ. ಸ್ವರ್ಣ ಮಂದಿರಕ್ಕೆ ಹೋಗುವ, ಅಂಗಡಿ ಮುಂಗಟ್ಟುಗಳಿಂದ ತುಂಬಿರುವ ಮುಖ್ಯ ದಾರಿಯಲ್ಲಿ ಬೆಳಗ್ಗೆ 6.15ರ ಸುಮಾರಿಗೆ ಸ್ಫೋಟ ಸಂಭವಿಸಿತ್ತು.