Thursday, 12th December 2024

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; ಓರ್ವನ ಸಾವು

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಎಂಐಡಿಸಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಉದ್ಯೋಗಿ ಸಾವನ್ನಪ್ಪಿದ್ದು, ಇತರ ಐವರು ಗಾಯಗೊಂಡಿದ್ದಾರೆ.

ಗುರುವಾರದ ಸರಣಿ ಸ್ಫೋಟಕ್ಕೆ ಸಂಬಂಧಿಸಿ, ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಕೈಗಾರಿಕಾ ಪ್ರದೇಶದಲ್ಲಿ ಮುಂಜಾನೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ” ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಶನ್ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತಡ್ವಿ ಪಿಟಿಐಗೆ ತಿಳಿಸಿದ್ದಾರೆ.

ಕುಲ್ಗಾಂವ್-ಬದ್ಲಾಪುರ ಅಗ್ನಿಶಾಮಕ ಸೇವೆಗಳ ಮುಖ್ಯ ಅಗ್ನಿಶಾಮಕ ಅಧಿಕಾರಿ ಭಗವತ್ ಸೋನಾವಾನೆ ಅವರ ತಂಡವು ಬೆಂಕಿಯನ್ನು ನಂದಿಸಿದ್ದಾರೆ. ಕಾರ್ಖಾನೆಯು ಖಾರ್ವಾಯಿ ಎಂಐಡಿಸಿ ಪ್ರದೇಶದಲ್ಲಿದೆ,ಘಟಕದಲ್ಲಿ ಸರಣಿ ದೊಡ್ಡ ಸ್ಫೋಟಗಳು ಸಂಭವಿಸಿವೆ ಮತ್ತು ಆವರಣದಲ್ಲಿ ಬೆಂಕಿ ಕಾಣಿಸಿ ಕೊಂಡಿದೆ ಎಂದು ಹೇಳಿದರು.