Saturday, 7th September 2024

ಬಿ.ಎಲ್.ಸಂತೋಷ್’ರಿಗೆ ನೋಟಿಸ್‌ ಜಾರಿ

ಹೈದರಾಬಾದ್‌: ಭಾರತ್ ರಾಷ್ಟ್ರ ಸಮಿತಿಯ ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಇದೇ ತಿಂಗಳು 21 ರಂದು ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್ ನೀಡಿದೆ. ಬಿಜೆಪಿಯು ಬಿಆರ್‌ಎಸ್‌ ಪಕ್ಷದ ಶಾಸಕ ರನ್ನು ಖರೀದಿಸಲು ಮುಂದಾದ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ತನಿಖೆ ನಡೆಸಲು ಕೆ.ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು ಏಳು ಸದಸ್ಯರನ್ನೊಳಗೊಂಡ ವಿಶೇಷ ತಂಡ ರಚಿಸಿತ್ತು.

ಈ ತಂಡ ಸೆಕ್ಷನ್ 41 (ಎ) ಅಡಿಯಲ್ಲಿ ಬಿ ಎಲ್ ಸಂತೋಷ್ ಅವರಿಗೆ ನೋಟಿಸ್ ನೀಡಿದೆ. 

error: Content is protected !!