ನ್ಯಾಯಮಂಡಳಿ ಸ್ಥಾಪನೆಗೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಖಾರ್ಗೋನ್ ನಗರದಲ್ಲಿ ಭಾನುವಾರ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಹಾನಿಯ ಮೌಲ್ಯಮಾಪನಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗಾಗಿ ನಿಬಂಧನೆಗಳ ಪ್ರಕಾರ ನ್ಯಾಯಮಂಡಳಿಯನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ.
ನಿವೃತ್ತ ಜಿಲ್ಲಾ ನ್ಯಾಯಾಧೀಶ ಡಾ.ಶಿವಕುಮಾರ್ ಮಿಶ್ರಾ ನೇತೃತ್ವದ ಮತ್ತು ರಾಜ್ಯ ಸರ್ಕಾರದ ನಿವೃತ್ತ ಕಾರ್ಯ ದರ್ಶಿ ಪ್ರಭಾತ್ ಪರಾಶರ್ ಅವರನ್ನೊಳ ಗೊಂಡ ನ್ಯಾಯಪೀಠವು ಮೂರು ತಿಂಗಳಲ್ಲಿ ಕಾರ್ಯವನ್ನು ಪೂರ್ಣ ಗೊಳಿಸಲಿದೆ ಎಂದು ಹೇಳಲಾಗುತ್ತಿದೆ.
ಏ.10ರಂದು ಖರಗೋನ್ನಲ್ಲಿ ರಾಮನವಮಿ ಮೆರವಣಿಗೆಗಳ ಸಂದರ್ಭದಲ್ಲಿ ಮೂರು ಕಡೆಗಳಲ್ಲಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿದ್ದವು.