Sunday, 15th December 2024

ದಾಲ್ ಸರೋವರದಲ್ಲಿ ಬೆಂಕಿ ಅವಘಡ: ಬೋಟ್​ಗಳು ಸುಟ್ಟು ಭಸ್ಮ

ಶ್ರೀನಗರ: ಶ್ರೀನಗರದ ಶೋರ್ ಅಫಕ್ ಲೇಕ್ ದಾಲ್‌ನಲ್ಲಿ ಶನಿವಾರ ಬೆಳಗ್ಗೆ ಹೌಸ್‌ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೂರಕ್ಕೂ ಬೋಟ್​ಗಳು ಬೆಂಕಿಗಾಹುತಿಯಾಗಿವೆ.

ಸುದ್ದಿ ತಿಳಿದ ತಕ್ಷಣವೇ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಯಿತು.

ಅಗ್ನಿಶಾಮಕ ಮತ್ತು ತುರ್ತು ವಿಭಾಗದ ಅಧಿಕಾರಿ ಮಾತನಾಡಿದ, ಗಾರ್ಡ್ ನಂ. 9 ರ ಸಮೀಪವಿರುವ ಕೆರೆಯಲ್ಲಿ ಹೌಸ್‌ಬೋಟ್‌ಗೆ ಬೆಂಕಿ ಹೊತ್ತಿ ಕೊಂಡಿದೆ ಎಂದು ನಮಗೆ ಮಾಹಿತಿ ಬಂದಿತ್ತು. ಸುದ್ದಿ ತಿಳಿದ ಕೂಡಲೇ ನಮ್ಮ ತಂಡವು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಆರಂಭಿಸಿತು. ಅಷ್ಟರೊಳಗೆ ಎರಡು ಮೂರು ದೋಣಿಗಳಿಗೆ ಬೆಂಕಿ ವ್ಯಾಪಿಸಿತ್ತು. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಿಯಂತ್ರಣಕ್ಕೆ ಬಂದ ನಂತರ ಎಷ್ಟು ಹಾನಿಯಾಗಿದೆ ಎಂದು ಅಂದಾಜಿಸಲಾಗುತ್ತದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದರು.

ಶ್ರೀನಗರದ ಹಮಾಮಾ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಗಾಯಗೊಂಡಿದ್ದರು.