Wednesday, 30th October 2024

BOB Recruitment 2024: ಬ್ಯಾಂಕ್‌ ಆಫ್‌ ಬರೋಡಾದಲ್ಲಿ 592 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

BOB Recruitment 2024

ಬೆಂಗಳೂರು: ಬ್ಯಾಂಕ್‌ ಉದ್ಯೋಗಿಯಾಗಬೇಕು ಎನ್ನುವುದು ಬಹುತೇಕರ ಕನಸು. ಈ ಕನಸು ನನಸಾಗುವ ದಿನ ಬಂದಿದೆ. ದೇಶದ ಪ್ರಮುಖ ಬ್ಯಾಂಕ್‌ ಆಗಿರುವ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2024). ಮ್ಯಾನೇಜರ್‌, ಟೆಸ್ಟಿಂಗ್‌ ಸ್ಪೆಷಲಿಸ್ಟ್‌ ಸೇರಿ ಒಟ್ಟು 592 ಹುದ್ದೆಗಳಿವೆ. ಸಿಎ, ಎಂಬಿಎ, ಪದವಿ, ಬಿ.ಇ ಅಥವಾ ಬಿ.ಟೆಕ್‌, ಎಂಸಿಎ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನ. 19 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ – ಬಿಸಿನೆಸ್ ಫೈನಾನ್ಸ್ – 1 ಹುದ್ದೆ, ವಿದ್ಯಾರ್ಹತೆ: ಸಿಎ, ಎಂಬಿಎ
ಎಂಎಸ್‌ಎಂಇ ರಿಲೇಶನ್‌ಶಿಪ್ ಮ್ಯಾನೇಜರ್ – 120 ಹುದ್ದೆ, ವಿದ್ಯಾರ್ಹತೆ: ಪದವಿ
ಎಂಎಸ್ಎಂಇ ರಿಲೇಶನ್‌ಶಿಪ್ ಸೀನಿಯರ್ ಮ್ಯಾನೇಜರ್ – 20 ಹುದ್ದೆ, ವಿದ್ಯಾರ್ಹತೆ: ಪದವಿ
ವಲಯ ಲೀಡ್ ಮ್ಯಾನೇಜರ್-ವ್ಯಾಪಾರ ಸ್ವಾಧೀನ ವ್ಯವಹಾರ – 13 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌, ಎಂಸಿಎ
ಎಟಿಎಂ/ಕಿಯೋಸ್ಕ್ ಬಿಸಿನೆಸ್ ಯೂನಿಟ್ ಮ್ಯಾನೇಜರ್ – 10 ಹುದ್ದೆ, ವಿದ್ಯಾರ್ಹತೆ: ಪದವಿ
ಮ್ಯಾನೇಜರ್ – ಎಐ ಎಂಜಿನಿಯರ್ – 10 ಹುದ್ದೆ, ವಿದ್ಯಾರ್ಹತೆ: ಪದವಿ
ಮರ್ಚೆಂಟ್ ಸ್ವಾಧೀನಪಡಿಸಿಕೊಳ್ಳುವ ಆಪ್ಸ್ ತಂಡ 10 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌, ಎಂಸಿಎ
ಬ್ಯಾಂಕಿಂಗ್ ಅಪ್ಲಿಕೇಶನ್ ಪ್ರಾಡಕ್ಟ್ ಮ್ಯಾನೇಜರ್ – 10 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌
ಯುಐ/ಯುಎಕ್ಸ್‌ ಸ್ಪೆಷಲಿಸ್ಟ್ – 8 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಡಿಜಿಟಲ್ ಲೆಂಡಿಂಗ್ ಜರ್ನಿ ಸ್ಪೆಷಲಿಸ್ಟ್ – 6 ಹುದ್ದೆ, ವಿದ್ಯಾರ್ಹತೆ: ಪದವಿ, ಎಂಬಿಎ, ಪಿಜಿಡಿಎಂ
ಬಿಸಿನೆಸ್ ಮ್ಯಾನೇಜರ್ (ಯುಪಿಐ) – 5 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌, ಎಂಸಿಎ
ಡೇಟಾ ಎಂಜಿನಿಯರ್ – 5 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌
ಡಿಜಿಟಲ್ ವಂಚನೆ ತಡೆಗಟ್ಟುವ ತಜ್ಞ – 5 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌, ಎಂಸಿಎ, ಎಂಬಿಎ
ಸ್ಟಾರ್ಟ್ ಅಪ್ ಬಿಸಿನೆಸ್ ಲೀಡ್ – 5 ಹುದ್ದೆ, ವಿದ್ಯಾರ್ಹತೆ: ಪದವಿ
ಟೆಸ್ಟಿಂಗ್‌ ಸ್ಪೆಷಲಿಸ್ಟ್‌ – 5 ಹುದ್ದೆ, ವಿದ್ಯಾರ್ಹತೆ: ಬಿ.ಇ ಅಥವಾ ಬಿ.ಟೆಕ್‌
ಏರಿಯಾ ರಿಸೀವಬಲ್ಸ್ ಮ್ಯಾನೇಜರ್ – 27 ಹುದ್ದೆ, ವಿದ್ಯಾರ್ಹತೆ: ಪದವಿ
ರೀಜನಲ್ ರಿಸೀವಬಲ್ಸ್ ಮ್ಯಾನೇಜರ್ – 40 ಹುದ್ದೆ, ವಿದ್ಯಾರ್ಹತೆ: ಪದವಿ
ಏರಿಯಾ ರಿಸೀವಬಲ್ಸ್ ಮ್ಯಾನೇಜರ್ – 120 ಹುದ್ದೆ, ವಿದ್ಯಾರ್ಹತೆ: ಪದವಿ ಮುಂತಾದ ಹುದ್ದೆಗಳಿವೆ.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಸ್‌) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ/ಇಡಬ್ಲ್ಯುಎಸ್‌/ಒಬಿಸಿ ಅಭ್ಯರ್ಥಿಗಳು 600 ರೂ. ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಹಿಳಾ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ತಯಾರಿಸಿ, ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

BOB Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಆಯ್ಕೆಯ ಹುದ್ದೆಯನ್ನು ಸೆಲೆಕ್ಟ್‌ ಮಾಡಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌: bankofbaroda.inಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: Union Bank Recruitment 2024: ಯೂನಿಯನ್‌ ಬ್ಯಾಂಕ್‌ನಲ್ಲಿದೆ 1,500 ಹುದ್ದೆ; ಹೀಗೆ ಅರ್ಜಿ ಸಲ್ಲಿಸಿ