Friday, 20th September 2024

ಬಂಗಾಳದಲ್ಲಿ ಬಾಂಬ್‌ ಸ್ಪೋಟ: ಆರು ಮಂದಿಗೆ ಗಾಯ

ಕೋಲ್ಕತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಬಾಂಬ್‌ ಸ್ಪೋಟದಿಂದಾಗಿ ಸುಮಾರು ಆರು ಮಂದಿ ಗಾಯಗೊಂಡರು.

ಶುಕ್ರವಾರ ರಾತ್ರಿ ಗೋಸಾಬಾ ಪ್ರದೇಶದ ಗಾಯಾಳುಗಳ ಮನೆಯಲ್ಲಿ ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳು ಬಿಜೆಪಿ ಪಕ್ಷಕ್ಕೆ ಸೇರಿದವರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಈ ಆರು ಮಂದಿ ಬಿಜೆಪಿ ಬೆಂಬಲಿಗರು ಮತ್ತು ಮದುವೆ ಸಮಾರಂಭದಿಂದ ಬರುತ್ತಿದ್ದಾಗ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳುಗಳ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಅವರ ಕುಟುಂಬದ ಸದಸ್ಯರ ಹೇಳಿಕೆಗಳ ಬಗ್ಗೆ ನಮಗೆ ಅರಿವಿದೆ. ಬಾಂಬ್ ಸ್ಫೋಟ ಸಂಭವಿಸಿದಾಗ ಅವರು ಬಾಂಬ್ ತಯಾರಿಸಲಾಗುತ್ತಿತ್ತು ಎಂದು ತೋರುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.