Sunday, 22nd December 2024

Bomb Threats : ಪರೀಕ್ಷೆ ತಪ್ಪಿಸಲು ಶಾಲಾ ಮಕ್ಕಳು ಮಾಡಿದ ಕಿತಾಪತಿ ಏನ್‌ ಗೊತ್ತಾ? ಇವ್ರ ಕೃತ್ಯಕ್ಕೆ ಪೊಲೀಸರೇ ಶಾಕ್‌!

Bomb Threats

ನವದೆಹಲಿ: ಕೆಲ ದಿನಗಳ ಹಿಂದೆ ದೆಹಲಿಯ (Delhi) ಕೆಲ ಶಾಲೆಗಳಿಗೆ ನಿರಂತರವಾಗಿ ಬಾಂಬ್‌ ಬೆದರಿಕೆಗಳು (Bomb Threats) ಬಂದಿದ್ದವು. ಇದೀಗ ಮತ್ತೆ ಬಾಂಬ್‌ ಬೆದರಿಕೆ ಘಟನೆಗೆ ವಿಚಿತ್ರ ಸಂಗತಿಯೊಂದು ನಡೆದಿದೆ. ಸ್ವತಃ ವಿದ್ಯಾರ್ಥಿಗಳೇ ಶಾಲೆಗೆ ಬಾಂಬ್‌ ಬೆದರಿಕೆ ಹಾಕಿದ್ದಾರೆ. ರೋಹಿಣಿ ಜಿಲ್ಲೆಯ ಕನಿಷ್ಠ ಎರಡು ಶಾಲೆಗಳಿಗೆ ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇಮೇಲ್‌ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರ ವಿಶೇಷ ತಂಡ ಪತ್ತೆಹಚ್ಚಿದೆ.

ನವೆಂಬರ್ 28 ರಂದು  ರೋಹಿಣಿ ಪ್ರಶಾಂತ್ ವಿಹಾರ್ ಪಿವಿಆರ್ ಮಲ್ಟಿಪ್ಲೆಕ್ಸ್‌ನಲ್ಲಿ ಸ್ಪೋಟ ಸಂಭವಿಸಿದ ಒಂದು ದಿನದ ನಂತರ ವೆಂಕಟೇಶ್ವರ್ ಗ್ಲೋಬಲ್‌ ಸ್ಕೂಲ್‌ಗೆ ಬಾಂಬ್‌ ಬೆದರಿಕೆ ಬಂದಿದ್ದವು. ನಂತರ ರೋಹಿಣಿಯಲ್ಲಿರುವ ಮತ್ತೊಂದು ಶಾಲೆಗೂ ಬೆದರಿಕೆ ಕರೆ ಬಂದಿತ್ತು. ನಂತರ ಪೊಲೀಸರು ತನಿಖೆ ಪ್ರಾರಂಭ ಮಾಡಿದ್ದರು. ನಂತರ ಬೆದರಿಕೆ ಕರೆಯ ಅಸಲಿಯತ್ತು ಬಯಲಾಗಿದೆ.

ಇಬ್ಬರನ್ನು ವಿದ್ಯಾರ್ಥಿಗಳ ಮೇಲೆ ಅನುಮಾನ ವ್ಯಕ್ತಪಡಿಸದ ಪೊಲೀಸರು ಅವರನ್ನು ಕೌನ್ಸೆಲಿಂಗ್ ಗೆ ಒಳ ಪಡಿಸಿದ್ದರು. ಕೌನ್ಸೆಲಿಂಗ್ ಸಮಯದಲ್ಲಿ, ವಿದ್ಯಾರ್ಥಿಗಳು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡರು . ತಾವು ಪರೀಕ್ಷೆಗೆ ಓದಿಕೊಂಡಿರಲಿಲ್ಲ. ಅದಕ್ಕಾಗಿ ಏನಾದರೂ ಮಾಡಿ ಪರೀಕ್ಷೆ ನಿಲ್ಲಿಸಬೇಕೆಂದು ಉಪಾಯ ಮಾಡಿ ಬೆದರಿಕೆ ಇಮೇಲ್‌ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.

 ಘಟನೆಯ ಬಗ್ಗೆ ಪೊಲೀಸರು ವಿದ್ಯಾರ್ಥಿಗಳ ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆ ಶಾಲೆಗಳಿಗೆ ಬಾಂಬ್ ಬೆದರಿಕೆಯೊಡ್ಡಿದ ಘಟನೆಗಳಿಂದ ಈ ಕಲ್ಪನೆಯನ್ನು ಪಡೆದುಕೊಂಡಿದ್ದೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ದೆಹಲಿ ಪೊಲೀಸರು ಕಳೆದ 11 ದಿನಗಳಲ್ಲಿ ಹಲವು ಶಾಲೆಗಳಿಗೆ ಸರಣಿ ಬಾಂಬ್‌ ಬೆದರಿಕೆಗಳು ಬಂದಿವೆ ಇನ್ನುವುದನ್ನು ತಿಳಿಸಿದ್ದಾರೆ. ಈಗಾಗಲೇ ಈ ಸಂಬಂಧ ತನಿಖೆ ನಡೆಯುತ್ತಿದ್ದು, ಬೆದರಿಕೆಯನ್ನು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (ವಿಪಿಎನ್) ಬಳಸಿ ಇಮೇಲ್‌ಗಳನ್ನು ಕಳುಹಿಸಲಾಗಿದೆ. ಇದು ಅಪರಾಧಿಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ದೆಹಲಿಯಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿರುವುದು ಇದೇ ಮೊದಲಲ್ಲ. ಈ ವರ್ಷದ ಮೇ ತಿಂಗಳಿನಿಂದ, 50 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಇಮೇಲ್‌ಗಳು ನಗರದ ಶಾಲೆಗಳು, ಆಸ್ಪತ್ರೆಗಳು, ವಿಮಾನ ನಿಲ್ದಾಣಗಳು ಮತ್ತು ವಿಮಾನಯಾನ ಕಂಪನಿಗಳನ್ನು ಗುರಿಯಾಗಿಸಿಕೊಂಡಿವೆ. ಈ ಪ್ರಕರಣಗಳಲ್ಲಿ ಪೊಲೀಸರು ಇನ್ನೂ ಯಾವುದೇ ಪ್ರಗತಿ ಸಾಧಿಸಿಲ್ಲ.

ಈ ಸುದ್ದಿಯನ್ನೂ ಓದಿ : Bomb Threat: ದೆಹಲಿಯ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ ಕರೆ; ಕಳೆದ ಒಂದು ವಾರದಲ್ಲಿ 7ನೇ ಘಟನೆ