Sunday, 15th December 2024

ಬೋರ್ನ್‌ವಿಟಾ ಆರೋಗ್ಯಕರ ಪಾನೀಯವಲ್ಲ

ವದೆಹಲಿ: ಬೋರ್ನ್‌ವಿಟಾವನ್ನು ಆರೋಗ್ಯಕರ ಪಾನೀಯಗಳ ಸ್ಥಾನದಿಂದ ತೆಗೆದು ಹಾಕುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ತಮ್ಮ ಸೈಟ್‌ಗಳು ಮತ್ತು ಪ್ಲಾಟ್‌ಫಾರ್ಮ್‌ಗಳಿಂದ ತಂಪುಪಾನೀಯಗಳನ್ನು ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ಹೇಳಿದೆ.

ಬೋರ್ನ್‌ವೀಟಾದಲ್ಲಿ ಸ್ವೀಕಾರಾರ್ಹ ಮಿತಿಗಿಂತ ಹೆಚ್ಚಿನ ಸಕ್ಕರೆ ಮಟ್ಟವಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗನಡೆಸಿದ ತನಿಖೆಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಈ ಸಲಹೆ ಕೇಳಿ ಬಂದಿದೆ.

ಸುರಕ್ಷತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಪೂರೈಸಲು ವಿಫಲವಾಗಿ ‘ಆರೋಗ್ಯ ಪಾನೀಯಗಳು’ ಎಂದು ಬಿಂಬಿಸುತ್ತಿರುವ ಕಂಪೆನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎನ್‌ಸಿಪಿಸಿಆರ್‌ ಈ ಹಿಂದೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ ಸಲಹೆ ನೀಡಿತ್ತು.

ದೇಶದ ಆಹಾರ ಕಾನೂನುಗಳಲ್ಲಿ ‘ಆರೋಗ್ಯ ಪಾನೀಯ’ ಎನ್ನುವುದನ್ನು ವ್ಯಾಖ್ಯಾನಿಸಲಾಗಿಲ್ಲ ಮತ್ತು ಅದರ ಅಡಿಯಲ್ಲಿ ಆರೋಗ್ಯ ಪಾನೀಯ ಎಂಬಂತೆ ಬಿಂಬಿಸುವುದು ನಿಯಮಗಳನ್ನು ಉಲ್ಲಂಘಿಸಿದಂತಾಗುತ್ತದೆ.

ಹಾಲಿನ ಉತ್ಪನ್ನ ಅಥವಾ ಮಾಲ್ಟ್ ಆಧಾರಿತ ಪಾನೀಯಗಳನ್ನು ‘ಆರೋಗ್ಯ ಪಾನೀಯಗಳು’ ಎಂದು ಲೇಬಲ್ ಮಾಡದಂತೆ ಎಫ್‌ಎಸ್‌ಎಸ್‌ಎಐ ಈ ತಿಂಗಳ ಆರಂಭದಲ್ಲಿ ಇ-ಕಾಮರ್ಸ್ ಪೋರ್ಟಲ್‌ಗೆ ಸೂಚನೆ ನೀಡಿತ್ತು.

ಆ ಮೂಲಕ ಆ ಜಾಹೀರಾತುಗಳನ್ನು ತೆಗೆದುಹಾಕಲು ಅಥವಾ ಸರಿಪಡಿಸಲು ವೆಬ್‌ಸೈಟ್‌ಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.