ಕೋಝಿಕೋಡ್: ಕೇರಳದಲ್ಲಿ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. ಕೋಝಿಕೋಡ್ ನಲ್ಲಿ 13 ವರ್ಷದ ಬಾಲಕ ವೈರಸ್ ನಿಂದ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಸೋಂಕಿಗೊಳಗಾಗಿರುವ ಬಾಲಕ ಛತಮಂಗಳಂ ಹತ್ತಿರ ಬಳಿಯಿರುವ ಚುಲೂರ್ ಮೂಲದವ ನಾಗಿದ್ದಾನೆಂದು, ಪುಣೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾ ಲಜಿಗೆ ಕಳುಹಿಸಲಾದ ಹುಡುಗನ ಮಾದರಿಗಳು ನಿಫಾ ವೈರಸ್ ಇರುವಿಕೆಯನ್ನು ದೃಢಪಡಿಸಿವೆ.
ನಿಫಾ ವೈರಸ್ ಹಣ್ಣಿನ ಬಾವಲಿಗಳ ಲಾಲಾರಸದಿಂದ ಹರಡುತ್ತದೆ. ಕೆಲ ದಿನಗಳ ಹಿಂದಷ್ಟೇ ಬಾಲಕ ಅತೀವ್ರ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದ. ಪ್ರಾಥಮಿಕ ಪರೀಕ್ಷೆಗಳಿಂದ ಬಾಲಕನಿಗೆ ನಿಫಾ ವೈರಸ್ ಸೋಂಕು ಇರುವ ಶಂಕೆಗಳು ವ್ಯಕ್ತವಾಗಿವೆ ಎಂದು ತಿಳಿದುಬಂದಿದೆ.
ದುರದೃಷ್ಟವಶಾತ್, ಹುಡುಗ ಬೆಳಿಗ್ಗೆ ನಿಧನರಾದರು. ಶನಿವಾರ ರಾತ್ರಿ ಮಗುವಿನ ಸ್ಥಿತಿ ಗಂಭೀರವಾಗಿದೆ. ಪತ್ತೆ ಹಚ್ಚುವ ಕಾರ್ಯ ಆರಂಭಿಸಿದ್ದೇವೆ. ಹುಡುಗನ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರತ್ಯೇಕಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.