Saturday, 14th December 2024

ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆಯನ್ನು ಭಾರತ ಮಂಗಳ ವಾರ ಯಶಸ್ವಿಯಾಗಿ ಪೂರೈಸಿದೆ. ಭಾರತೀಯ ನೌಕಾಪಡೆಯ ಪರೀಕ್ಷಾರ್ಥ ಪ್ರಯೋಗಗಳ ಭಾಗವಾಗಿ ಈ ಕ್ಷಿಪಣಿ ಪರೀಕ್ಷೆ ನಡೆಸ ಲಾಗಿತ್ತು.

ಭೂಮಿ ಮೇಲೆ ದಾಳಿ ನಡೆಸಬಲ್ಲ ಬ್ರಹ್ಮೋಸ್ ಸೂಪರ್​ಸಾನಿಕ್ ಕ್ಷಿಪಣಿಯ ಪರೀಕ್ಷೆಯನ್ನು ಕೆಲವು ದಿನಗಳ ಹಿಂದಷ್ಟೇ ಯಶಸ್ವಿ ಯಾಗಿ ನೆರವೇರಿಸಲಾಗಿತ್ತು. 298 ಕಿ.ಮೀ.ನಿಂದ 450 ಕಿ.ಮೀ. ತನಕದ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ.

ಡಿಆರ್​ಡಿಒ ಅಭಿವೃದ್ಧಿ ಪಡಿಸಿದ ಹಲವು ಕ್ಷಿಪಣಿಗಳನ್ನು ಸೇನೆ ಹೊಂದಿದ್ದು ಕ್ರಮವಾಗಿ ಪರೀಕ್ಷೆ ನಡೆಸುತ್ತ ಬಂದಿದೆ.