Thursday, 3rd October 2024

ನಾಮಪತ್ರ ಹಿಂತೆಗೆದುಕೊಳ್ಳಲು ಲಂಚದ ಆಮಿಷ: ಕೇರಳ ಬಿಜೆಪಿ ಅಧ್ಯಕ್ಷನಿಗೆ ನೋಟೀಸ್

ತಿರುವನಂತಪುರಂ: ಲಂಚ ಪ್ರಕರಣದಲ್ಲಿ ಸಿಲುಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಕಳಿಸಲಾಗಿದೆ.

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಕೆ.ಸುರೇಂದ್ರನ್ ಸ್ಪರ್ಧಿಸಿ ದ್ದರು. ತಮ್ಮ ಎದುರಾಳಿಗಳಿಗೆ ನಾಮಪತ್ರ ಹಿಂತೆಗೆ ದುಕೊಳ್ಳಲು ಪ್ರಭಾವ ಬೀರಿ, ಲಂಚ ನೀಡಿದ ಆರೋಪ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮೇಲಿದೆ.

ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಚುನಾವಣಾ ಆಕ್ರಮ ಆರೋಪ ಕೇಳಿ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಿಸಲು ಕಾಸರ ಗೋಡು ಕೋರ್ಟ್ ಸಮ್ಮತಿ ನೀಡಿದೆ. ಕೆ.ಸುರೇಂದ್ರನ್ ವಿರುದ್ಧ ಸ್ಪರ್ಧಿಸಿದ್ದ ಸಿಪಿಐ (ಎಂ) ಅಭ್ಯರ್ಥಿ ವಿ.ವಿ.ರಮೇಶನ್ ಎಂಬುವರು ದೂರು ದಾಖಲಿಸಿದ್ದರು. ಈಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸುರೇಂದ್ರನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಸೂಚಿಸಿತ್ತು.

ಬಿಎಸ್ ಪಿ ಅಭ್ಯರ್ಥಿ ಕೆ ಸುಂದರ ಅವರು ಕೆ ಸುರೇಂದ್ರನ್ ಬಗ್ಗೆ ಆರೋಪ ಮಾಡಿ 2.5 ಲಕ್ಷ ರು ಹಾಗೂ ಸ್ಮಾರ್ಟ್ ಫೋನ್ ನೀಡಿ ನಾಮಪತ್ರ ಹಿಂಪಡೆಯಲು ಸೂಚಿಸಿದ್ದರು.

ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ಕೆ.ಸುಂದರಾ ಅವರು ನಾಮಪತ್ರ ಹಿಂಪಡೆಯಲು ಬೆದರಿಕೆ ಹಾಗೂ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ವಿವಿ ರಮೇಶ್ ಎಂಬವರು ದೂರು ದಾಖಲಿಸಿದ್ದರು. ಈ ಕುರಿತಂತೆ ಸುರೇಂದ್ರನ್‌ರನ್ನು ಪ್ರಶ್ನಿಸಲು ಕ್ರೈಂ ಬ್ರ್ಯಾಂಚ್ ಮುಂದಾಗಿದೆ.