Sunday, 1st December 2024

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರಾಜೀನಾಮೆ..?

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ಆರೋಪದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಜನವರಿ 22 ರಂದು ಡಬ್ಲ್ಯುಎಫ್‌ಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಲೈಂಗಿಕ ಕಿರುಕುಳ ಆರೋಪದಿಂದಾಗಿ ಭಾರತದ ಕುಸ್ತಿ ಫೆಡರೇಷ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಭಾರತದ ಇತರ ಅಗ್ರ ಕುಸ್ತಿಪಟು ಸೇರಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.