Wednesday, 11th December 2024

ಬ್ರಿಜ್ ಭೂಷಣ್ ವಿರುದ್ದ ದೃಢ ಪುರಾವೆಗಳಿಲ್ಲ: ದೆಹಲಿ ಪೊಲೀಸ್

ವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಲು ಸಾಕಷ್ಟು ಪುರಾವೆಗಳು ಸಿಕ್ಕಿಲ್ಲ ಎಂದು ದೆಹಲಿ ಪೊಲೀಸರು ಬುಧವಾರ ಹೇಳಿದ್ದಾರೆ.

ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ಆರೋಪಗಳನ್ನು ಸಾಬೀತುಪಡಿಸಲು ದೃಢವಾದ ಪುರಾವೆಗಳು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆದ್ದರಿಂದ ಅವರು ತಕ್ಷಣ ಬಂಧಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಪೊಲೀಸರು 15 ದಿನಗಳಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಖಾಸಗಿ ಮಾಧ್ಯಮ ವೊಂದಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ. ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾದಲ್ಲಿ ಎಸೆಯಲು ಹರಿದ್ವಾರವನ್ನು ತಲುಪಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.