Sunday, 24th November 2024

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಲೈಂಗಿಂಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಮೇರೆಗೆ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಗುರುವಾರ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನೀಡಿದ ಭರವಸೆಯಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುತ್ತಿದೆ.

ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರನ್ನು ಭೇಟಿ ಮಾಡಿ ಸಭೆ ನಡೆಸಿದ್ದರು. ಈ ವೇಳೆ ಲೈಂಗಿಕ ಕಿರುಕುಳ ಪ್ರಕರಣದ ಚಾರ್ಜ್ ಶೀಟ್ ಅನ್ನು ಜೂ.15 ರೊಳಗೆ ಸಲ್ಲಿಸಲಾಗುವುದು ಎಂದು ಪ್ರತಿಭಟನಾನಿರತ ಹೋರಾಟ ಗಾರರಿಗೆ ಭರವಸೆ ನೀಡಿದ್ದರು.

ಕ್ರೀಡಾ ಸಚಿವರು ಸುದೀರ್ಘ ಚರ್ಚೆ ನಡೆಸಿದ ಬಳಿಕ ಕುಸ್ತಿಪಟುಗಳು ಜೂ. 15 ರ ತನಕ ತಮ್ಮ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದರು.

“ಜೂನ್ 15 ದೊಳಗೆ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಸಚಿವರು ಕುಸ್ತಿಪಟುಗಳಿಗೆ ಭರವಸೆ ನೀಡಿರುವುದರಿಂದ ನಾವು ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.