ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೋಷಾರೋಪ ಪಟ್ಟಿ ದಾಖಲಿಸಲು ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
ಮಾಜಿ ಬಿಜೆಪಿ ಸಂಸದರ ವಿರುದ್ಧ ಮಹಿಳೆಯರ ಗೌರವಕ್ಕೆ ಧಕ್ಕೆ ತಂದ ಅಪರಾಧವೂ ಇದೆ.
ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರರ ವಿರುದ್ಧ ಆರೋಪಗಳನ್ನ ದಾಖಲಿಸಲು ದೆಹಲಿ ನ್ಯಾಯಾಲಯವು ಸಾಕಷ್ಟು ಪುರಾವೆಗಳನ್ನು ಕಂಡುಕೊಂಡಿದೆ.