Sunday, 6th October 2024

ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ

ನವದೆಹಲಿ:  ಮುಂದಿನ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆಗಮಿಸಲಿದ್ದಾರೆ.

ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಜೊತೆಗಿನ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ದೃಢಪಡಿಸಿದರು. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಮಿಸುತ್ತಿರುವುದಾಗಿ ಹೇಳಿದರು.

ಭಾರತದ ಗಣರಾಜ್ಯೋತ್ಸವ ದಿನದ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವುದು ದೊಡ್ಡ ಗೌರವವಾಗಿದೆ. ಭಾರತದ ಆಹ್ವಾನವನ್ನು ಬ್ರಿಟನ್ ಪ್ರಧಾನಿ ಜಾನ್ಸನ್ ಸ್ವೀಕರಿಸಿದ್ದಾರೆ ಎಂದರು.