ಸಿಂಗ್ ಅವರ ಬಂಧನ ಮತ್ತು ಭಾರತದ ಉನ್ನತ ಕುಸ್ತಿ ಸಂಸ್ಥೆಯ ಹುದ್ದೆಯಿಂದ ವಜಾ ಗೊಳಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಈ ಹೇಳಿಕೆ ಬಂದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿಂಗ್, ʻನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೂ ನಾನು ನೇಣು ಹಾಕಿಕೊಳ್ಳುತ್ತೇನೆʼ ಎಂದಿದ್ದಾರೆ.
ಭಾರತದ ಕೆಲವು ಅತ್ಯುತ್ತಮ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪಗಳನ್ನು ಎದುರಿಸುತ್ತಿರುವ ಸಿಂಗ್, ತಮ್ಮ ಪಕ್ಷವು ಕೇಳಿದರೆ ಭಾರತದ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈ ಹಿಂದೆ ಹೇಳಿದ್ದರು. ಜಂತರ್ ಮಂತರ್ ನಲ್ಲಿ ಭಾರತೀಯ ಕುಸ್ತಿಪಟುಗಳು 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.