Sunday, 15th December 2024

ಕುಪ್ವಾರಾದಲ್ಲಿ ಉಗ್ರರ ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನ ವಿಫಲ

ಶ್ರೀನಗರ್: ಕಾಶ್ಮೀರದ ಉತ್ತರದ ಕುಪ್ವಾರಾ ಜಿಲ್ಲೆಯಲ್ಲಿ ಮೂರು ಎ.ಕೆ.47 ಶಸ್ತ್ರಾಸ್ತ್ರ, ನಾಲ್ಕು ಪಿಸ್ತೂಲ್ ಹಾಗೂ ಇತರ ಮದ್ದು ಗುಂಡುಗಳನ್ನು ಕಳ್ಳಸಾಗಣೆ ಮಾಡಲು ಉಗ್ರರು ನಡೆಸಿದ ಪ್ರಯತ್ನ ವಿಫಲಗೊಳಿಸಲಾಗಿದೆ.

ತಾಂಗ್ಧಾರ್ ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಮೂರು ಎಕೆ 47 ರೈಫಲ್ಸ್, ನಾಲ್ಕು ಪಿಸ್ತೂಲ್ ಗಳನ್ನು ವಶಪಡಿಸಿಕೊಂಡಿ ರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಡಿ ನಿಯಂತ್ರಣ ರೇಖೆ ಸೇರಿದಂತೆ ಜಾಬ್ಡಿ ತಾಂಗ್ಧಾರ್ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಶಸ್ತ್ರಾಸ್ತ್ರ ಕಳ್ಳಸಾಗಣೆ ಪ್ರಯತ್ನ ವಿಫಲಗೊಳಿಸಿದ ನಂತರ ಉಗ್ರರಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಭದ್ರತಾ ಪಡೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.