Saturday, 14th December 2024

ಬಹುಜನ ಸಮಾಜ ಪಕ್ಷ -ಭಾರತ್ ರಾಷ್ಟ್ರ ಸಮಿತಿ ಮೈತ್ರಿ

ವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷದೊಂದಿಗೆ ತಮ್ಮ ಪಕ್ಷದ ಮೈತ್ರಿಯನ್ನು ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆಸಿಆರ್ ಮಂಗಳವಾರ  ಘೋಷಿಸಿದ್ದಾರೆ.

ಸೀಟು ಹಂಚಿಕೆಗೆ ಸಂಬಂಧಿಸಿದಂತೆ ನಿರ್ಧರಿಸುತ್ತವೆ ಎಂದು ಹೇಳಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಆರ್‌ಎಸ್ ಮತ್ತು ಬಿಎಸ್ಪಿ ಒಟ್ಟಾಗಿ ಹೋರಾಡಲು ನಾವು ನಿರ್ಧರಿಸಿದ್ದೇವೆ. ನಾವು ಅನೇಕ ಅಂಶಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಎಂಬುದನ್ನು ನಾವು ನಾಳೆ ನಿರ್ಧರಿಸುತ್ತೇವೆ. ನಾನು ಇನ್ನೂ ಮಾಯಾವತಿ ಅವರೊಂದಿಗೆ ಮಾತನಾಡಿಲ್ಲ. ನಾನು ಆರ್.ಎಸ್.ಪ್ರವೀಣ್ ಕುಮಾರ್ ಅವರೊಂದಿಗೆ ಮಾತ್ರ ಮಾತನಾಡಿದ್ದೇನೆ ಎಂದು ಕೆಸಿಆರ್ ಹೇಳಿದರು.

ಕೆಸಿಆರ್ ಅವರನ್ನು ಭೇಟಿಯಾಗಲು ಸಂತೋಷವಾಗಿದೆ. ಸಂವಿಧಾನವನ್ನು ನಾಶಪಡಿಸುವ ಪಿತೂರಿ ನಡೆಯುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನೂ ಒಟ್ಟಿಗೆ ಎದುರಿಸುವ ಅವಶ್ಯಕತೆಯಿದೆ. ನಮ್ಮ (ಬಿಆರ್‌ಎಸ್ ಮತ್ತು ಬಿಎಸ್ಪಿ) ಸ್ನೇಹವು ತೆಲಂಗಾಣವನ್ನು ಸಂಪೂರ್ಣವಾಗಿ ಬದಲಾಯಿಸು ತ್ತದೆ ಎಂದು ಬಿಎಸ್ಪಿ ನಾಯಕ ಆರ್.ಎಸ್.ಪ್ರವೀಣ್ ಹೇಳಿದರು.

ಆಡಳಿತಾರೂಢ ಕಾಂಗ್ರೆಸ್ ಬಿಜೆಪಿ ಮತ್ತು ಬಿಆರ್‌ಎಸ್-ಬಿಎಸ್ಪಿ ಮೈತ್ರಿಕೂಟದ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಈ ಮೂಲಕ ಇಂಡಿಯಾ ಮೈತ್ರಿ ಕೂಟಕ್ಕೆ ಬಿಗ್ ಶಾಕ್ ಅನ್ನು ನೀಡಲಾಗಿದೆ.