Saturday, 12th October 2024

ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ: ಮಾಜಿ ಸಿಎಂ ಯಡಿಯೂರಪ್ಪ ಸುಳಿವು

ವದೆಹಲಿ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಸಂಜೆಯೊಳಗೆ ಪ್ರಕಟ ವಾಗಲಿದ್ದು, ಕೆಲವು ಹಾಲಿ ಶಾಸಕರಿಗೆ ಟಿಕೆಟ್ ಸಿಗಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸುಳಿವು ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದ್ದು, ಮೊದಲ ಪಟ್ಟಿಯಲ್ಲಿ 180 ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ.

ಕೆಲವು ಹಾಲಿ ಶಾಸಕರನ್ನು ಹೊರತುಪಡಿಸಿ ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯ 100 ಕ್ಕೂ ಹೆಚ್ಚು ಪೊಲೀಸರು ಹಾಗೂ 2 ಕೆಎಸ್‌ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಈಗಾಗಲೇ ಕೇಂದ್ರೀಯ ಸಂಸದೀಯ ಮಂಡಳಿಯ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಮಾಡಿದ್ದು, ಇಂದು ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ಬಳಿಕ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.