Saturday, 14th December 2024

ಬಾಂದ್ರಾದಲ್ಲಿ ಕಟ್ಟಡ ಕುಸಿದು ಓರ್ವನ ಸಾವು, ಐದು ಮಂದಿಗೆ ಗಾಯ

ಮುಂಬೈ: ಸೋಮವಾರ ಮುಂಬೈಯ ಬಾಂದ್ರಾ ಪ್ರದೇಶದಲ್ಲಿ ಕಟ್ಟಡ ಕುಸಿದು ಓರ್ವ ಮೃತಪಟ್ಟು, ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಸಿದ್ದಿಖಿ ತಿಳಿಸಿದ್ದಾರೆ.

ಕಟ್ಟಡ ಕುಸಿದು ಸಿಕ್ಕಿಹಾಕಿಕೊಂಡಿದ್ದ 17 ಮಂದಿಯನ್ನು ರಕ್ಷಿಸಲಾಗಿದೆ. ಬಾಂದ್ರಾ ಪೂರ್ವ ಪ್ರದೇಶದ ಖೆರವಾಡಿ ರಸ್ತೆ ಪ್ರದೇಶ ದಲ್ಲಿ ಕಟ್ಟಡ ಮತ್ತೊಂದು ಕಟ್ಟಡದ ಮೇಲೆ ಕುಸಿದು ಬಿದ್ದು ಈ ದುರ್ಘಟನೆ ಸಂಭವಿಸಿದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.