ನವದೆಹಲಿ: ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಿಗೆ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪ್ರಕಟಿಸಿದ್ದಾರೆ,
ಪಶ್ಚಿಮ ಬಂಗಾಳದಲ್ಲಿ ರೂ.95 ಸಾವಿರ ಕೋಟಿ ವೆಚ್ಚದಲ್ಲಿ 675 ಉದ್ದದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದಾರೆ. ಅಸ್ಸಾಂನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ರೂ.34 ಸಾವಿರ ಕೋಟಿ ವೆಚ್ಚದಲ್ಲಿ 1,300 ಕಿಲೋ ಮೀಟರ್ ಹೆದ್ದಾರಿ ಅಭಿವೃದ್ಧಿ, ಕೇರಳದಲ್ಲಿ ರೂ.65 ಸಾವಿರ ಕೋಟಿ ವೆಚ್ಚದಲ್ಲಿ 1,100 ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಪ್ರಕಟಿಸಿದ್ದಾರೆ.
ತಮಿಳುನಾಡಿನಲ್ಲಿ ರೂ.1.03 ಲಕ್ಷ ಕೋಟಿ ವೆಚ್ಚದಲ್ಲಿ 3,500 ಕಿಲೋ ಮೀಟರ್ ಉದ್ಧದ ರಸ್ತೆ ಅಭಿವೃದ್ಧಿ ಯೋಜನೆಗಳು ಜಾರಿ ಯಲ್ಲಿವೆ ಎಂದು ತಿಳಿಸಿದ್ದಾರೆ.