ಮುಂಬೈ: ಘಟ್ಟ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು, ಏಳು ಮಂದಿ ಮೃತಪಟ್ಟು, ಸುಮಾರು 35 ಜನರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಂದ್ದರ್ಬರ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದೆ.
ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಲ್ಕಪುರದಿಂದ ಗುಜರಾತ್ನ ಸೂರತ್ಗೆ ತೆರಳುತ್ತಿದ್ದ ಖಾಸಗಿ ಬಸ್ ಕೊಂಡೈಬರಿ ಘಾಟ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ 30 ಅಡಿಗಳಷ್ಟು ಅಳದ ಹಳ್ಳಕ್ಕೆ ಉರುಳಿ ಬಿತ್ತು. ಈ ದುರ್ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡರು. ಗಾಯಾಳುಗಳನ್ನು ವಿಸರವಾಡಿ ಆಸ್ಪತ್ರೆಗೆ ಸೇರಿಸಲಾಗಿದೆ.