ಭೋಪಾಲ್ : ಮಧ್ಯಪ್ರದೇಶ ರಾಜ್ಯ ರಾಜಧಾನಿ ಭೋಪಾಲ್ ನಿಂದ 560 ಕಿ.ಮೀ ದೂರದಲ್ಲಿರುವ ಸಿಧಿ ಜಿಲ್ಲೆಯಲ್ಲಿ ಬಸ್ ಸೇತುವೆಯಿಂದ ಕಾಲುವೆಗೆ ಉರುಳಿ 32 ಪ್ರಯಾಣಿಕರು ಮೃತಪಟ್ಟಿದ್ದರು. ಇದೀಗ ಸಾವಿನ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಾಟ್ನಾ ಗ್ರಾಮದ ಬಳಿಯ ಕಾಲುವೆಗೆ ಉರುಳಿ ಬಿದ್ದಿತ್ತು. ಇದರಿಂದಾಗಿ 32 ಪ್ರಯಾಣಿಕರು ಮೃತಪಟ್ಟಿರುವುದಾಗಿ ತಿಳಿದು ಬಂದಿತ್ತು. 7 ಮಂದಿಯನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.